ಬೆಂಗಳೂರು, ನ. 24 : ಆರೋಪಿಗಳ ಬಗ್ಗೆ ಖಚಿತ ಮಾಹಿತಿ ತಿಳಿದ ನಂದಿನಿ ಲೇಔಟ್ ಇನ್ಸ್ಪೆಕ್ಟರ್ ಲೋಹಿತ್ ಬಂಧಿಸಲು ಹೋಗಿದ್ದಾರೆ. ಆದರೆ ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಲೋಹಿತ್ ಆತ್ಮರಕ್ಷಣೆಗಾಗಿ ಹಂತಕರ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಈ ಘಟನೆಯಲ್ಲಿ ಪಿಎಸ್ಐ ನಿತ್ಯಾನಂದ ಹಾಗೂ ಪೇದೆ ಬಸವಣ್ಣ ಅವರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇತ್ತ ಹತ್ಯೆ ಮಾಡಲು ಸುಪಾರಿ ಪಡೆದಿದ್ದ ಆರೋಪಿಯ ಕಾಲಿಗೆ ಪೀಣ್ಯ ಇನ್ಸ್ಪೆಕ್ಟರ್ ಮುದ್ದು ರಾಜು ಗುಂಡು ಹೊಡೆದಿದ್ದಾರೆ. ಪ್ರಭು ತಮಿಳು ಎಂಬವನ ಕಾಲಿಗೆ ಇನ್ಸ್ಪೆಕ್ಟರ್ ಗುಂಡು ಹೊಡೆದಿದ್ದಾರೆ.