ಬೀದರ ಉಜಳಂಬದಲ್ಲಿ ಸಿಎಂ ಗ್ರಾಮ ವಾಸ್ತವ್ಯ

ಬೀದರ ಉಜಳಂಬದಲ್ಲಿ ಸಿಎಂ ಗ್ರಾಮ ವಾಸ್ತವ್ಯ

ಬೀದರ. ಜೂ. 27 : ಜಿಲ್ಲೆಯ ಇಂದು ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸಿಎಂ ಕುಮಾರಸ್ವಾಮಿಯವರು ರಾಯಚೂರಿನ ಕರೇಗುಡ್ಡದಲ್ಲಿ 2ನೇ ಗ್ರಾಮವಾಸ್ತವ್ಯ ಮುಗಿಸಿ 3ನೇ ಗ್ರಾಮ ಇದಾಗಿದೆ. ಸಿಎಂ ಕುಮಾರಸ್ವಾಮಿ ಬೆಳಗ್ಗೆ 5 ಕ್ಕೆ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಿಂದರಸ್ತೆ ಮಾರ್ಗವಾಗಿ ಹೊರಟು, 10.30 ಕ್ಕೆ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಆಗಮಿಸುವರು. ಈ ಹಿನ್ನಲೆಯಲ್ಲಿ ಗ್ರಾಮದ ಶಾಲೆಗೆ ಅವಸರದಲ್ಲಿ ಸುಣ್ಣ ಬಣ್ಣ ಬಳಿದು ಕಂಗೊಳಿಸುವಂತೆ ಮಾಡಲಾಗಿದೆ. ಜೊತೆಗೆ ಸಿಎಂ ವಾಸ್ತವ್ಯಕ್ಕಾಗಿ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಲೆ ಮುಂಭಾಗ ಜನತಾ ದರ್ಶನಕ್ಕೆ ವೇದಿಕೆ ಸಿದ್ಧಪಡಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos