ಮರ್ಧಾಳ: ಮರಕ್ಕೆ ಕಾರು ಢಿಕ್ಕಿ; 6 ಜನರಿಗೆ ಗಾಯ

  • In State
  • February 21, 2019
  • 315 Views
ಮರ್ಧಾಳ: ಮರಕ್ಕೆ ಕಾರು ಢಿಕ್ಕಿ; 6 ಜನರಿಗೆ ಗಾಯ

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಮಹೀಂದ್ರಾ ಎಕ್ಸ್ ಯುವಿ ಕಾರೊಂದು ಹೆದ್ದಾರಿ ಬದಿಯ ಮರ ಹಾಗೂ ವಿದ್ಯುತ್ ಕಂಬವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ 6 ಜನರಿಗೆ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ಗುರುವಾರ ಸಂಭವಿಸಿದೆ. ಗಾಯಾಳುಗಳ ಪೈಕಿ ಇಬ್ಬರು
ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಮೂಲದ ಯಾತ್ರಿಕರಿದ್ದ ಕಾರು ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ಅಳೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ
ಈ ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು, ನಾಲ್ಕುನಜ
ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದಾಗಿ ವಿದ್ಯುತ್ ಕಂಬ ಕಾರಿನ ಮೇಲೆ ಉರುಳಿಬಿದ್ದ ಪರಿಣಾಚ ತಂತಿ ತುಂಡಾಗಿ ರಸ್ತೆಗೆ ಬಿದ್ದಿತ್ತು. ಸ್ವಲ್ಪ
ಸಮಯ ರಸ್ತೆ ತಡೆ ಉಂಟಾಗಿದ್ದು, ಬಳಿಕ ಕಡಬ ಪೊಲೀಸರು ಸ್ಥಳಕ್ಕೆಆಗಮಿಸಿ  ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos