ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಬಹಳ ಅದ್ದೂರಿಯಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಡಿಸಿಎಂ ಡಿಕ ಶಿವಕುಮಾರ್ ಮಾತನಾಡಿದರು.
ಹೆಣ್ಣು ಕುಟುಂಬದ ಕಣ್ಣು. ಅವರ ಕುಟುಂದಲ್ಲಿ ಭಾಗೋದಯವಾಗಲೆಂದು ಗೃಹಲಕ್ಷ್ಮಿ ಯೋಜನೆಯನ್ನು ಬೆಳಗಾವಿಯಲ್ಲಿ ಚಾಲನೆ ನೀಡಿ, ಇದುವರೆಗೆ 1 ಕೋಟಿ 10 ಲಕ್ಷ, ಮಹಿಳೆಯರಿಗೆ ರೂ.2000 ಭತ್ಯೆ ನೀಡಲಾಗಿದ್ದು ರಾಷ್ಟ್ರದಲ್ಲೇ ಇದೊಂದು ಇತಿಹಾಸ.
ಶಿಕ್ಷಣದಲ್ಲಿ ಗುಣಮಟ್ಟ ತರಲು, ರೈತರು, ಕಾರ್ಮಿಕರು, ಶಿಕ್ಷಕರು ಹಾಗೂ ಎಲ್ಲ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸರ್ಕಾರದ ಹಂತದಲ್ಲಿ ಸಮಿತಿ ರಚಿಸಿ ಕೋಟಿಗೂ ಹೆಚ್ಚು ಬಂಡವಾಳ ಹಾಕಿ ಕೆಪಿಎಸ್, ಸಿಎಸ್ ಆರ್ ಮಾದರಿ ಶಾಲೆಗಳನ್ನು ತೆರೆಯುವ ಯೋಜನೆ ಮೂಲಕ ದೊಡ್ಡ ನಗರದಲ್ಲಿ ದೊರೆಯುವಂತಹ ಶಿಕ್ಷಣ ಹಳ್ಳಿಮಕ್ಕಳಿಗೂ ಸಿಗವಂತಹ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.
ಮುಂದಿನ ದಿನದಲ್ಲಿ ಎಲ್ಲ ವರ್ಗದವರಿಗೆ 35 ವರ್ಷದ ಮಿತಿಯೊಳಗೆ ಅರಣ್ಯ ಹಕ್ಕು ನೀಡಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳು ಬಡವರನ್ನು ಒಕ್ಕಲೆಬ್ಬಿಸಬಾರದು. ಶರಾವತಿ ಸಂತ್ರಸ್ತರ ರಕ್ಷಣೆ ಬಗ್ಗೆ ನಮ್ಮ ಬದ್ಧತೆ ಇದ್ದು ಬಡತನ ನಿರ್ಮೂಲನೆ ನಮ್ಮ ಯುದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.