1 ವರ್ಷದಲ್ಲಿ 22 ಲಕ್ಷ ಸರ್ಕಾರಿ ಹುದ್ದೆ ಭರ್ತಿ

1 ವರ್ಷದಲ್ಲಿ 22 ಲಕ್ಷ ಸರ್ಕಾರಿ ಹುದ್ದೆ ಭರ್ತಿ

ರಾಜಸ್ಥಾನ, ಏ. 23, ನ್ಯೂಸ್ ಎಕ್ಸ್ ಪ್ರೆಸ್: (ಪಿಟಿಐ) ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 1 ವರ್ಷದಲ್ಲಿ 22 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪುನರುಚ್ಚರಿಸಿದ್ದಾರೆ.

ರಾಜಸ್ಥಾನದ ದುಂಗರ್‍ಪುರ್‍ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ರಾಹುಲ್, 5 ವರ್ಷಗಳಲ್ಲಿ ದೇಶದ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವುದಾಗಿ ತಿಳಿಸಿದರು.

ಎಂದಿನಂತೆ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ಮೋದಿ ಉದ್ಯೋಗ ಸೃಷ್ಟಿಸಿಲ್ಲ. ಬಡತನ ನಿರ್ಮೂಲನೆ ಮಾಡಿಲ್ಲ, ರೈತರ ಜೀವನ ಮಟ್ಟ ಸುಧಾರಿಸಿಲ್ಲ. 5 ವರ್ಷ ಭರವಸೆ ನೀಡುವುದರಲ್ಲೇ ಕಾಲ ಕಳೆದರು ಎಂದು ಟೀಕಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos