10 ಲಕ್ಷ ಗಾಂಜಾ ವಶ

10 ಲಕ್ಷ ಗಾಂಜಾ ವಶ

ಬೆಂಗಳೂರು ,ಜ 11 : ಹೊರವರ್ತುಲ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಮಾದಕ ವಸ್ತುಗಳನ್ನು ವ್ಯವಸ್ಥಿತ ರೀತಿಯಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 10 ಲಕ್ಷ ಮೌಲ್ಯದ 30.200 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಿಜರ್ (39), ಶೇಕ್ ಇಬ್ರೀಸ್ (36), ಫೈರೋಜ್ (25) ಬಂಧಿತ ಆರೋಪಿಗಳು.
ಹೆಣ್ಣೂ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹೊರವರ್ತುಲ ರಸ್ತೆಯ ಸರ್ವಿಸ್ ರಸ್ತೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ದಾಳಿ ನಡೆಸಿ ಮೂವರನ್ನು ಬಂಧಿಸಿ ದ್ವಿಚಕ್ರ ವಾಹನದಲ್ಲಿದ್ದ 30 ಕೆಜಿ 200 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos