14 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ

14 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ

ಚಿಕ್ಕಬಳ್ಳಾಪುರ: ಸಂತ್ರಸ್ತ ಬಾಲಕಿ ತುಮಕೂರು ಜಿಲ್ಲೆಯ ಮಧುಗಿರಿ ಸರ್ಕಾರಿ ಹಾಸ್ಟೆಲ್‌ನಲ್ಲಿದ್ದಳು. ಬಾಗೇಪಲ್ಲಿ ಮೂಲದ ಬಾಲಕಿ ಬಡತನದ ಕೌಟುಂಬಿಕ ಹಿನ್ನೆಲೆಯವಳು. ಬಾಲಕಿಗೆ 14 ವರ್ಷ ವಯಸ್ಸು. ತಾಯಿ ಅಂಗನವಾಡಿ ಶಿಕ್ಷಕಿ. ಮೂರ್ನಾಲ್ಕು ದಿನಗಳ ಹಿಂದೆ ಹೊಟ್ಟೆ ನೋವು ಎಂದು ತಾಯಿ ಬಳಿ ಹೇಳಿಕೊಂಡಾಗ, ಬಾಗೇಪಲ್ಲಿಯ ಸರ್ಕಾರಿ ಆಸ್ಪತ್ರೆಗೆ ಹೋಗಿ ಚುಚ್ಚುಮದ್ದು ಪಡೆದಿದ್ದಳು. ಆದರೆ ಕೆಲವೇ ಹೊತ್ತಿನಲ್ಲಿ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಪುನಃ ಆಸ್ಪತ್ರೆಗೆ ಹೋಗಿದ್ದರು.

ಆಗ ಆಕೆಗೆ ಮತ್ತೊಂದು ಇಂಜೆಕ್ಷನ್ ನೀಡಿ, ಸ್ಕ್ಯಾನಿಂಗ್ ಮಾಡಿಸಿದ್ದಾರೆ. ಆಗ ಆಕೆ ಗರ್ಭಿಣಿ ಎಂಬ ವಿಚಾರ ಆಸ್ಪತ್ರೆಯವರ ಗಮನಕ್ಕೂ ಬಂದಿದೆ. ಬಳಿಕ ಆಸ್ಪತ್ರೆ ವೈದ್ಯರು ಆಕೆಯ ಹೆರಿಗೆ ಮಾಡಿಸಿದ್ದಾರೆ. ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಮಗು 2.2 ಕಿಲೋ ತೂಕ ಇದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.

ಆಸ್ಪತ್ರೆಯ ಫಾರಂ ಭರ್ತಿ ಮಾಡುವುದಕ್ಕಾಗಿ ವಿವರ ಕೇಳಿದಾಗ ಆಕೆ ಶಾಲಾ ವಿದ್ಯಾರ್ಥಿನಿ ಎಂಬ ಅಂಶ ಬೆಳಕಿಗೆ ಬಂದಿದೆ. ನಂತರ ತಾಯಿ ಮತ್ತು ಮಗುವನ್ನು ಹೆಚ್ಚಿನ ಆರೈಕೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಈ ನಡುವೆ, ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos