ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ

ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ

ಚಿಕ್ಕಮಗಳೂರು:  ಇತ್ತೀಚಿನ ದಿನಗಳಲ್ಲಿ ಆಹಾರದಲ್ಲಿ ಹೆಚ್ಚು ಸಮಸ್ಯೆ ಕಾಣಿಸಿಕೊಂಡಿದೆ. ಕುಟುಂಬ ಸಮಾರಂಭದಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮತ್ತೊಂದೆಡೆ ಬೆಂಗಳೂರು ವಿವಿ ಹಾಸ್ಟೆಲ್​​ ಊಟದಲ್ಲಿ ಹುಳುಗಳು ಪತ್ತೆಯಾಗಿದ್ದು ಹಾಸ್ಟೆಲ್​ ವಾರ್ಡನ್​ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.

ಮನೆಯ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಲಾಗಿತ್ತು. ಬಿರಿಯಾನಿ ಸೇವಿಸಿದವರಿಗೆ ಭೇದಿ, ವಾಂತಿ ಕಾಣಿಸಿಕೊಂಡಿದ್ದು 17 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಸ್.ಎನ್.ಉಮೇಶ್ ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಆಸ್ಪತ್ರೆಯ ಮೂರು ಕೊಠಡಿಗಳಲ್ಲಿ ಅಸ್ವಸ್ಥರನ್ನು ದಾಖಲಿಸಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

 

ಫ್ರೆಶ್ ನ್ಯೂಸ್

Latest Posts

Featured Videos