ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮುಖಾಮುಖಿ!

ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮುಖಾಮುಖಿ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಒಂದು ಹೆಸರಾಂತ ಕ್ರೀಡೆಯಾಗಿದೆ. ಈ ಕ್ರೀಡೆಯನ್ನು ಚಿಕ್ಕ ಮಕ್ಕಳಿಂದ ಹಾಗೂ ದೊಡ್ಡ ಮಕ್ಕಳು ಸಹ ಹೆಚ್ಚಾಗಿ ಇಷ್ಟಪಡುತ್ತಿದ್ದಾರೆ.
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ.
2019ರ ಫೈನಲ್‌ನಲ್ಲಿ ಅನುಭವಿಸಿದ್ದ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಿವೀಸ್ ಕಾಯುತ್ತಿದ್ದು, ಇಂಗ್ಲೆಂಡ್‌ಗೆ ಆರಂಭಿಕ ಶಾಕ್ ನೀಡಲು ಎದುರು ನೋಡುತ್ತಿದೆ. ಹಾಲಿ ವಿಶ್ವ ಟಿ20 ಚಾಂಪಿಯನ್ ಸಹ ಆಗಿರುವ ಇಂಗ್ಲೆಂಡ್ ತಂಡದ ತುಂಬಾ ಆಲ್ರೌಂಡರ್‌ಗಳೇ ತುಂಬಿಕೊಂಡಿದ್ದು, ಹಲವು ಆಟಗಾರರು ಏಕಾಂಗಿಯಾಗಿ ಪಂದ್ಯ ಗೆಲ್ಲಿಸಬಲ್ಲ ಸಾರ್ಮಥ್ಯ ಹೊಂದಿದ್ದಾರೆ.
ಸಣ್ಣ ಪ್ರಮಾಣದ ಗಾಯದ ಸಮಸ್ಯೆ ಎದುರಿಸುತ್ತಿರುವ ತಾರಾ ಆಲ್ರೌಂಡರ್ ಬೆನ್ ಸ್ಟೋಕ್ಸ್ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇನ್ನು ವಿಶ್ವಕಪ್‌ಗೂ ಮುನ್ನ ಈ ಎರಡು ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದ್ದವು. ಕಿವೀಸ್ ವಿರುದ್ಧ ಇಂಗ್ಲೆಂಡ್ ಮೇಲುಗೈ ಸಾಧಿಸಿತ್ತು.
ನ್ಯೂಜಿಲೆಂಡ್‌ಗೆ ಈ ಪಂದ್ಯದಲ್ಲಿ ನಾಯಕ ಕೇನ್ ವಿಲಿಯಮ್ಸನ್ ಹಾಗೂ ವೇಗಿ ಟಿಮ್ ಸೌಥಿ ಹಾಗೂ ಲಾಕಿ ಫರ್ಗ್ಯೂಸನ್ ಸೇವೆಯೂ ಲಭ್ಯವಾಗಿಲ್ಲ. ವಿಲಿಯಮ್ಸನ್ ಅಭ್ಯಾಸ ಪಂದ್ಯಗಳಲ್ಲಿ ಆಡಿದರೂ, ಗಾಯದ ಪ್ರಮಾಣ ಉಲ್ಬಣಿಸದೆ ಇರಲಿದೆ ಎನ್ನುವ ಕಾರಣಕ್ಕೆ ಈ ಪಂದ್ಯಕ್ಕೆ ಗೈರಾಗಲು ನಿರ್ಧರಿಸಿದ್ದಾರೆ. ಲಾಕಿ ಫರ್ಗ್ಯೂಸನ್ ಹಾಗೂ ಟಿಮ್ ಸೌಥಿ ಉದ್ಘಾಟನಾ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಡ್ಯಾರೆಲ್ ಮಿಚೆಲ್, ಡೆವೊನ್ ಕಾನ್‌ವೇ, ಟಾಮ್ ಲೇಥಮ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್‌ರಂತಹ ಬಲಿಷ್ಠ ಬ್ಯಾಟರ್‌ಗಳ ಬಲ ಕಿವೀಸ್‌ಗಿದ್ದು, ವೇಗಿಗಳಾದ ಮ್ಯಾಟ್ ಹೆನ್ರಿ, ಮೇಲೆ ತಂಡ ಹೆಚ್ಚಿನ ನಿರೀಕ್ಷೆ ಇರಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos