ನಾಳೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ನಾಳೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಈ ಬಾರಿಯ ಪ್ರಥಮ ಪಿಯುಸಿ ಪರೀಕ್ಷೆಗಳ ಫಲಿತಾಂಶವನ್ನು ಮಾರ್ಚ್‌ 30ರ ಬೆಳಿಗ್ಗೆಯೇ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ ತಿಳಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪಕನ ಮಂಡಳಿ ನಡೆಸಿದ 2023-24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟಿಸಲಾಗುವುದು.

ನಾಳೆ ಬೆಳಿಗ್ಗೆ 11 ಗಂಟೆಗೆ ಮಂಡಳಿಯ ವೆಬ್ಸೈಟ್  krresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ನಾಳೆಯೇ ಕಾಲೇಜಿನಲ್ಲಿಯೂ ಫಲಿತಾಂಶ ವೀಕ್ಷಿಸಬಹುದಾಗಿದೆ ಫೆಬ್ರವರಿ 22 ರಿಂದ 27ರವರೆಗೆ ನಡೆದ ಪ್ರಥಮ ಪಿಯುಸಿ ಪರೀಕ್ಷೆ ನಾಳೆ ಫಲಿತಾಂಶ ಪ್ರಕಟವಾಗಲಿದೆ.

ಅನುತ್ತೀರ್ಣರಾದವರಿಗೆ ಮೇ ತಿಂಗಳಲ್ಲಿ ಪೂರಕ ಪರೀಕ್ಷೆ ನಡೆಸಲಾಗುತ್ತದೆ. ಮಂಡಳಿಯ ವತಿಯಿಂದ ಈಗಾಗಲೇ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಲಾಗಿದ್ದು ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos