2 ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಕ್ರಮ: ಸಿಎಂ

2 ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಕ್ರಮ: ಸಿಎಂ

ಬೆಂಗಳೂರು, ಸೆ. 6 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಂಡ್ಯದ ಮೈ ಶುಗರ್ ಕಂಪನಿ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ತಿಳಿಸಿದರು.

ಮೈ ಶುಗರ್ ಕಾರ್ಖಾನೆಯ 330 ನೌಕರರು  ಸ್ವಯಂ ನಿವೃತ್ತಿ ಹೊಂದಲು ಇಚ್ಛಿಸಿದ್ದು,  27 ಕೋಟಿ ರೂ. ವೆಚ್ಚದಲ್ಲಿ  ನಿವೃತ್ತಿ ಸೌಲಭ್ಯವನ್ನು ಒದಗಿಸಲಾಗುವುದು. ರೈತರಿಗೆ ಹಾಗೂ ಕಾರ್ಖಾನೆಯ ನೌಕರರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಆಧಾರದ ಮೇಲೆ ನೀಡುವುದು ಅಥವಾ ಕಾರ್ಯಾಚರಣೆ ಮತ್ತು ನಿರ್ವಹಣೆ ಮೇರೆಗೆ ನೀಡುವ ಬಗ್ಗೆ ಪರಿಶೀಲಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos