2 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

2 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

ಶ್ರೀನಗರ, ಏ. 25, ನ್ಯೂಸ್ ಎಕ್ಸ್ ಪ್ರೆಸ್: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ನಲ್ಲಿ ಭಾರತೀಯ ಯೋಧರು 2 ಉಗ್ರರನ್ನು ಹೊಡೆದುರುಳಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಇಂದು ಬೆಳಗಿನ ಜಾವ ಉಗ್ರರು ಇರುವ ಸುಳಿವು ಪಡೆದ ಯೋಧರು ಅವರಿಗಾಗಿ ಹುಡುಕಾಟ ನಡೆಸಿದ್ದರು. ಬಳಿಕ ಅವರು ಅನಂತ್ ನಾಗ್ ಜಿಲ್ಲೆಯ ಬಿಜ್ ಬೆಹರಾದ ಬಾಗೆಂದರ್ ಮೊಹಲ್ಲಾದಲ್ಲಿ ಕಾರ್ಯಾಚರಣೆ ನಡೆಸಿ 2 ಉಗ್ರರನ್ನು ಹತ್ಯೆಗೈದಿದ್ದಾರೆ.

ತಪ್ಪಿಸಿಕೊಳ್ಳುವ ಯತ್ನದಲ್ಲಿ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದರಿಂದ, ಭದ್ರತಾಪಡೆ ಸಿಬ್ಬಂದಿ ಕೂಡ ಪ್ರತಿದಾಳಿ ಆರಂಭಿಸಿದರು. ಈ ದಾಳಿಗೆ 2 ಉಗ್ರರು ಬಲಿಯಾಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos