ಶೋಪಿಯಾನ್ ಎನ್ಕೌಂಟರ್: 2 ಉಗ್ರರ ಬಲಿ

ಶೋಪಿಯಾನ್ ಎನ್ಕೌಂಟರ್: 2 ಉಗ್ರರ ಬಲಿ

ಶೋಪಿಯಾನ್, ಏ. 13, ನ್ಯೂಸ್ ಎಕ್ಸ್ ಪ್ರೆಸ್: ಇಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ 2 ಭಯೋತ್ಪಾದಕರನ್ನು ನಮ್ಮ ಭದ್ರತಾ ಪಡೆಗಳ ಹೊಡೆದುರುಳಿಸಿದ್ದಾರೆ.

ಶೋಪಿಯಾನ್ ಜಿಲ್ಲೆಯ ಗಹಾಂಡ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ಇಂದು ಮುಂಜಾನೆಯಿಂದಲೇ ಕಣಿವೆ ರಾಜ್ಯದಲ್ಲಿ ಸೇನೆ ಮತ್ತು ಉಗ್ರರ ನಡುವೆ ಎನ್ ಕೌಂಟರ್ ನಡೆಯುತ್ತಿತ್ತು.

ಭಾರತೀಯ ಯೋಧರನ್ನು ಕಂಡ ಕ್ಷಣ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos