23 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ವಜಾ

23 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ವಜಾ

ಬೆಂಗಳೂರು, ಜು. 31 : ಜಿಲ್ಲಾ ಕಾಂಗ್ರೆಸ್ ಸಮಿತಿಯೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಸಹಕರಿಸದ ಹಾಗೂ ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಪಕ್ಷ ಬಲವರ್ಧನೆಯಲ್ಲಿ ಪಾಲ್ಗೊಳ್ಳದಿರುವ ಆರೋಪದ ಮೇಲೆ 23 ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳನ್ನು ವಜಾಗೊಳಿ ಸಿದೆ.
ಮೈತ್ರಿ ಸರ್ಕಾರ ಪತನಕ್ಕೆ ಕಾರಣ ಶಾಸಕ ಸ್ಥಾನದಿಂದ ಅನರ್ಹಗೊಂಡ ಕಾಂಗ್ರೆಸ್ನ 11 ಅತೃಪ್ತ ಶಾಸಕರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ 23 ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳನ್ನು ಕೆಪಿಸಿಸಿ ಮಂಗಳವಾರ ವಜಾ ಮಾಡಿದೆ. ಎಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಕೂಡ ವಿಸರ್ಜನೆಗೊಳಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos