24 ಗಂಟೆಯಲ್ಲಿ 250 ಬಲಿ

24 ಗಂಟೆಯಲ್ಲಿ 250 ಬಲಿ

ಇಟಲಿ, ಮಾ. 14: ಎಲ್ಲರಲ್ಲಿ ಭಯ ಹುಟ್ಟಿಸಿರುವ ಮಾರಣಾಂತಿಕ ಕೊರೊನಾ ವೈರಸ್ ದೇಶದಲ್ಲಿದೆ ಹರಡಿದೆ.  ಹೌದು, ಇಟಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 250 ಜನರನ್ನು ಬಲಿ ಪಡೆದುಕೊಂಡಿದೆ.

ಇಟಲಿ ಸಣ್ಣ ದೇಶದಲ್ಲಿ ಕರೋನಾ ವೈರಸ್ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗ್ತದೆ. ಕಳೆದ 24 ಗಂಟೆಗಳಲ್ಲಿ ಇಟಲಿಯಲ್ಲಿ 250 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದೇ ದಿನದಲ್ಲಿ ಇಟಲಿಯಲ್ಲಿ ಕರೋನಾ ವೈರಸ್ನಿಂದ ಅತಿ ಹೆಚ್ಚು ಸಾವಾಗಿದೆ. ಇಟಲಿಯಲ್ಲಿ ಕರೋನಾ ವೈರಸ್ಗೆ ಈವರೆಗೆ 1266 ಮಂದಿ ಬಲಿಯಾಗಿದ್ದಾರೆ. ಒಟ್ಟು 17,660 ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ನೆನ್ನೆ ಸಂಜೆ 2547 ಮಂದಿಗೆ ಸೋಂಕು ತಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರೋನಾ ವೈರಸ್ ಇಟಲಿಯಲ್ಲಿ ವೇಗವಾಗಿ ಹರಡುತ್ತಿದೆ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಭಾರತೀಯರು ಅಲ್ಲಿ ವಾಸಿಸುತ್ತಿದ್ದಾರೆ. ಕೆಲ ಭಾರತೀಯರು ಇಟಲಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಶೀಘ್ರದಲ್ಲೇ ಶಂಕಿತರ ಬಗ್ಗೆ ತನಿಖೆ ನಡೆಸಲಾಗುವುದು. ಆದಷ್ಟು ಬೇಗ ಭಾರತಕ್ಕೆ ಕರೆತರುವುದಾಗಿ ಸರ್ಕಾರ ಹೇಳಿದೆ.

 

ಫ್ರೆಶ್ ನ್ಯೂಸ್

Latest Posts

Featured Videos