ಗರ್ಭಕೋಶದದ್ದ 2ಕೆಜಿ 650ಗ್ರಾಂ ಗಡ್ಡೆ ಹೊರತೆಗೆದ ವೈದ್ಯರು

ಗರ್ಭಕೋಶದದ್ದ 2ಕೆಜಿ 650ಗ್ರಾಂ ಗಡ್ಡೆ ಹೊರತೆಗೆದ ವೈದ್ಯರು

ಕೊರಟಗೆರೆ, ಮಾ. 20, ನ್ಯೂಸ್ ಎಕ್ಸ್ ಪ್ರೆಸ್: 2 ಕೆಜಿ 650ಗ್ರಾಂ ತೂಕದ ಗೆಡ್ಡೆಯು ಮಹಿಳೆಯ ಗರ್ಭಕೋಶದ ಸುತ್ತಲು ಕಳೆದ 4 ವರ್ಷದಿಂದ ಬೆಳೆದಿತ್ತು. 2ಕೆಜಿ 650ಗ್ರಾಂ ತೂಕದ ಗೆಡ್ಡೆಯನ್ನು ಕೊರಟಗೆರೆ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ ತೆಗೆಯುವಲ್ಲಿ ಯಶಸ್ವಿಯಾಗಿದೆ.

ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ತಜ್ಞಡಾ.ನಾಗಭೂಷಣ್, ಅರವಳಿಕೆ ತಜ್ಞ ಡಾ.ಪ್ರಕಾಶ್, ಆಸ್ಪತ್ರೆಯ ಸಿಬ್ಬಂದಿಗಳಾದ ಚಂದ್ರಕಲಾ, ಪ್ರೇಮಾ ಮತ್ತು ನಂಜೇಗೌಡ ನೇತೃತ್ವದ ವೈದ್ಯರ ತಂಡ ಕಮಲಮ್ಮ ಎಂಬ ಮಹಿಳೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಮಹಿಳೆಯ ಗರ್ಭಕೋಶ ಸುತ್ತಲೂ ಬೆಳೆದಿದ್ದ 2ಕೆಜಿ 650ಗ್ರಾಂ ತೂಕದ ಗೆಡ್ಡೆಯನ್ನು ಕೊರಟಗೆರೆ ಪಟ್ಟಣದ ಸರಕಾರಿ ವೈದ್ಯರ ತಂಡ ಸುಸೂತ್ರವಾಗಿ ಶಸ್ತ್ರಚಿಕಿತ್ಸೆ ನಡೆಸಿ ತೆಗೆದಿದ್ದು, ಕಮಲಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 15 ದಿನದ ಹಿಂದೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಮಲಮ್ಮ, ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದರು. ವೈದ್ಯರು ಪರೀಕ್ಷೆ ನಡೆಸಿದಾಗ ಗೆಡ್ಡೆ ಇರುವುದು ಪತ್ತೆಯಾಗಿದೆ. ನಂತರ ಆಸ್ಪತ್ರೆಗೆ ದಾಖಲಿಸಿಕೊಂಡ ವೈದ್ಯರ ತಂಡ ಸತತ 2ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಗೆಡ್ಡೆಯನ್ನು ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos