ಸಿದ್ದಗಂಗಾ ಶ್ರೀಗಳಿಗೆ 3 ಗಂಟೆಗಳ ಕಾಲ ಯಶಸ್ವೀ ಶಸ್ತ್ರಚಿಕಿತ್ಸೆ

ಸಿದ್ದಗಂಗಾ ಶ್ರೀಗಳಿಗೆ 3 ಗಂಟೆಗಳ ಕಾಲ ಯಶಸ್ವೀ ಶಸ್ತ್ರಚಿಕಿತ್ಸೆ

ಚೆನ್ನೈ:ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಶನಿವಾರ ಯಶಸ್ವಿಯಾಗಿ 3 ಗಂಟೆಗಳ ಕಾಲ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಡಾ.ರೇಲಾ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ ಸೆಂಟರ್‌ ಆಸ್ಪತ್ರೆಯಲ್ಲಿ ಜನಪ್ರಿಯ ವೈದ್ಯ ಡಾ. ಮಹಮದ್‌ ರೇಲಾ ಅವರು 111 ರ ಹರೆಯದ ಶ್ರೀಗಳಿಗೆ ಯಶಸ್ವೀ ಶಸ್ತ್ರ ಚಿಕಿತ್ಸೆ ನಡೆಸಿ ಇನ್ನೊಂದು ದಾಖಲೆ ಬರೆದಿದ್ದಾರೆ.

ಶಸ್ತ್ರ ಚಿಕಿತ್ಸೆ ಬಳಿಕ ಬಿಜಿಎಸ್‌ ಆಸ್ಪತ್ರೆಯ ವೈದ್ಯ ಡಾ.ರವೀಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅರಿವಳಿಕೆಯಿಂದ ಹೊರ ಬರಲು ಇನ್ನು 2 ಗಂಟೆ ತಗುಲುತ್ತದೆ ಎಂದಿದ್ದಾರೆ.

ಇನ್ನೂ 7 ದಿನಗಳ ಕಾಲ ಶ್ರೀಗಳಿಗೆ ಸಂಪೂರ್ಣ ವಿಶ್ರಾಂತಿ ಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಸ್ವಾಮೀಜಿಯವರಿಗೆ ಅಳವಡಿಸಿರುವ 11 ಸ್ಟೆಂಟ್‌ಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದ ಹಿನ್ನಲೆಯಿಂದ ಜ್ವರದಿಂದ ಬಳಲುತ್ತಿದ್ದರು ಹೀಗಾಗಿ ಏರ್‌ ಆ್ಯಂಬುಲೆನ್ಸ್‌ ಮೂಲಕ ಚೆನ್ನೈಗೆ ಕರೆದೊಯ್ಯಲಾಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos