300 ಪೊಲೀಸ್ ಸಬ್-ಇನ್ಸ್ಪೆಕ್ಟರ್ ನೇಮಕಾತಿ

  • In State
  • October 18, 2019
  • 163 Views
300 ಪೊಲೀಸ್ ಸಬ್-ಇನ್ಸ್ಪೆಕ್ಟರ್ ನೇಮಕಾತಿ

ಬೆಂಗಳೂರು, ಅ. 18: ಕರ್ನಾಟಕ ಪೊಲೀಸ್ ಇಲಾಖೆಯು 300 ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ನವೆಂಬರ್ 6,2019ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಯು.ಜಿ.ಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸೇವಾ ನಿರತ ಅಭ್ಯರ್ಥಿ: ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿ ಜೊತೆಯಲ್ಲಿ ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ 5 ವರ್ಷಗಳ ಕನಿಷ್ಟ ಸೇವೆಯನ್ನು ಸಹಾಯಕ ಪೊಲೀಸ್ ಸಬ್ಇನ್ಸ್ಪೆಕ್ಟರ್ /ಹೆಡ್ ಕಾನ್ಸ್ಟೇಬಲ್/ ಪೊಲೀಸ್ ಕಾನ್ಸ್ಟೇಬಲ್ ಆಗಿ ಪೂರ್ಣಗೊಳಿಸಿರಬೇಕು. ಹಾಗೂ ಹಾಲಿ ಪೊಲೀಸ್ ಇಲಾಖೆಯಲ್ಲಿ ಮೇಲಿನ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರಬೇಕು.

ವಯೋಮಿತಿ ಎಷ್ಟಿರಬೇಕು ?: 21 ರಿಂದ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕದ ವಿವರ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 2ಎ,2ಬಿ,3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1ಕ್ಕೆ ಸೇರಿದ ಅಭ್ಯರ್ಥಿಗಳು 100/- ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

 

ಫ್ರೆಶ್ ನ್ಯೂಸ್

Latest Posts

Featured Videos