39 ವರ್ಷದ ನಂತರ ಪೊಲೀಸರ ಬಲೆಗೆ ಬಿದ್ದ ಆರೋಪಿ

39 ವರ್ಷದ ನಂತರ ಪೊಲೀಸರ ಬಲೆಗೆ ಬಿದ್ದ  ಆರೋಪಿ

ಮಂಗಳೂರು, ಮಾ.8, ನ್ಯೂಸ್ ಎಕ್ಸ್ ಪ್ರೆಸ್:  39 ವರ್ಷಗಳಿಂದ ತಲೆ ಮರೆಸಿಕೊಂಡ ಆರೋಪಿಯನ್ನು ಮಂಗಳೂರು ಪೊಲೀಸರು ಇಂದು ಬಂಧಿಸಿದ್ದಾರೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ್ ಶೆಟ್ಟಿ ಎಂಬುವರರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಪ್ರಯತ್ನಿಸಲಾಗಿತ್ತು. ಆ ಪ್ರಕರಣದ ಆರೋಪಿ ಅವಿಲ್ ಡಿಸೋಜಾ ತಲೆ ಮರೆಸಿ ಕೊಂಡಿದ್ದ .

ಈಗ 39 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿ ಅವಿಲ್ ಡಿಸೋಜ(56) ರನ್ನು ರೌಡಿ ನಿಗ್ರಹ ದಳದ ಸಿಬ್ಬಂದಿ ಬಂಧಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1980 ರಲ್ಲಿ ಈತನ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ನಂತರ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ 39 ವರ್ಷಗಳಿಂದ ತಲೆಮರೆಸಿಕೊಂಡು ವಿದೇಶದಲ್ಲಿದ್ದ. ಆರೋಪಿಯ ಪತ್ತೆಯ ಬಗ್ಗೆ ನ್ಯಾಯಾಲಯವು ವಾರಂಟು ಹೊರಡಿಸಿತ್ತು.

ಇದೀಗ ಆರೋಪಿ ಮಂಗಳೂರಿಗೆ ಬಂದು ಕುಂಪಲದಲ್ಲಿ ಮನೆ ಮಾಡಿದ ಬಗ್ಗೆ ರೌಡಿ ನಿಗ್ರಹ ದಳದ ಸಿಬ್ಬಂದಿ ಮಾಹಿತಿ ಪಡೆದು ಬಂಧಿಸಿದ್ದಾರೆ .ಬಂಧಿತ ಆರೋಪಿಯ ಮುಂದಿನ ಕ್ರಮದ ಬಗ್ಗೆ ನಗರದ ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos