ಮೂರು ದಿನದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಮೂರು ದಿನದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು, ಸೆ. 8 : ಮುಂದಿನ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮಹಾರಾಷ್ಟ್ರದಿಂದ ಕೇರಳದ ನಡುವೆ ಗಾಳಿಯ ಒತ್ತಡ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಳೆದೊಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
‘ಯಲ್ಲೋ ಅಲರ್ಟ್’ : ಕರಾವಳಿ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆ.12 ವರೆಗೆ 65 ಮಿ.ಮೀ.ನಿಂದ 115 ಮಿ.ಮೀ. ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯಲ್ಲೋ ಅಲರ್ಟ್’ ನೀಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos