ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಆಡಳಿದ್ದಾರೆ ಜಡೇಜಾ

ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಆಡಳಿದ್ದಾರೆ ಜಡೇಜಾ

ಬೆಂಗಳೂರು: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆಲ್​ರೌಂಡರ್ ರವೀಂದ್ರ ಜಡೇಜಾ ಕಣಕ್ಕಿಳಿಯುವುದು ಖಚಿತವಾಗಿದೆ. ಮೊದಲ ಟೆಸ್ಟ್ ಪಂದ್ಯದ ವೇಳೆ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದ ಜಡೇಜಾ 2ನೇ ಪಂದ್ಯಕ್ಕೆ ಅಲಭ್ಯರಾಗಿದ್ದರು. ಅಲ್ಲದೆ ಕಳೆದ ಒಂದು ವಾರದಿಂದ ಅವರು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮಂಡಿರಜ್ಜು ಗಾಯದ ಸಮಸ್ಯೆಯಿಂದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್‍ನಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ತಂಡಕ್ಕೆ ಮರಳಿದ್ದಾರೆ. ಹೈದರಾಬಾದ್‍ನ ರಾಜೀವ್‍ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದ ಕ್ಷೇತ್ರ ರಕ್ಷಣೆಯ ವೇಳೆ ಗಾಯಗೊಂಡಿದ್ದ ರವೀಂದ್ರ ಜಡೇಜಾ ಅವರು ಬೆಂಗಳೂರಿನಲ್ಲಿರುವ ಎನ್‍ಸಿಎಯಲ್ಲಿ ಚಿಕಿತ್ಸೆ ಪಡೆದಿದ್ದು ಫಿಟ್ನೆಸ್ ಸರ್ಟಿಫಿಕೇಟ್ ಪಡೆದಿದ್ದು ಮೂರನೇ ಪಂದ್ಯಕ್ಕೆ ಲಭ್ಯವಾಗಿದ್ದಾರೆ. ಟೀಮ್‍ಇಂಡಿಯಾ ವಿರುದ್ಧ ಇಂದು ನಡೆಯಲಿರುವ 3ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್‍ನ ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos