ಭಾರತ ಹಾಗೂ ಇಂಗ್ಲೆಂಡ್ 3ನೇ ಟೆಸ್ಟ್‌ ಆರಂಭ!

ಭಾರತ ಹಾಗೂ ಇಂಗ್ಲೆಂಡ್ 3ನೇ ಟೆಸ್ಟ್‌ ಆರಂಭ!

ಬೆಂಗಳೂರು: ಇಂಗ್ಲೆಂಡ್ ಹಾಗೂ ಭಾರತ ನಡುವಿನ ಐದು ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 28 ರನ್​ಗಳಿಂದ ಜಯ ಸಾಧಿಸಿತ್ತು.

ಇನ್ನು ವಿಶಾಖಪಟ್ಟಣಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ಕಂಬ್ಯಾಕ್ ಮಾಡಿದ ಟೀಮ್ ಇಂಡಿಯಾ 106 ರನ್​ಗಳ ಅಮೋಘ ಗೆಲುವು ದಾಖಲಿಸಿತು. ಇದರೊಂದಿಗೆ ಸರಣಿಯು 1-1 ಅಂತರದಿಂದ ಸಮಗೊಂಡಿದೆ. ಇದೀಗ ಮೂರನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ. ಹೀಗಾಗಿ ರಾಜ್​ಕೋಟ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಶುರುವಾಗಿದೆ. ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಸರ್ಫರಾಝ್ ಖಾನ್ ಹಾಗೂ ಧ್ರುವ್ ಜುರೇಲ್ ಪಾದಾರ್ಪಣೆ ಮಾಡಿದ್ದಾರೆ.

ಮೂರನೇ ಟೆಸ್ಟ್​ ಪಂದ್ಯಕ್ಕೆ ಅಲಭ್ಯರಾಗಿರುವ ಕೆಎಲ್ ರಾಹುಲ್ ಸ್ಥಾನದಲ್ಲಿ ಸರ್ಫರಾಝ್ ಸ್ಥಾನ ಪಡೆದರೆ, ಕೆಎಸ್ ​ಭರತ್ ಸ್ಥಾನದಲ್ಲಿ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಧ್ರುವ್ ಜುರೇಲ್ ಕಣಕ್ಕಿಳಿದಿದ್ದಾರೆ. ಹಾಗೆಯೇ ಅಕ್ಷರ್ ಪಟೇಲ್ ತಂಡದಿಂದ ಹೊರಗುಳಿದಿದ್ದಾರೆ. ಅದರಂತೆ ಉಭಯ ತಂಡಗಳು ಈ ಕೆಳಗಿನಂತಿದೆ…

 

ಫ್ರೆಶ್ ನ್ಯೂಸ್

Latest Posts

Featured Videos