ಕಾರು ಮುಖಾಮುಖಿ 4 ಸಾವು

ಕಾರು ಮುಖಾಮುಖಿ 4 ಸಾವು

ಧಾರವಾಡ, ಜ. 27: ಕಾರುಗಳು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ 4 ಜನ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಸಂಭವಿಸಿದೆ.

ಮೃತರಲ್ಲಿ ಕುಂದಗೋಳ ಶಿವಾನಂದ ಮಠದ ಬಸವೇಶ್ವರ ಮಹಾಸ್ವಾಮಿಗಳು ಮತ್ತು ಅವರ ಕಾರು ಚಾಲಕ ಸೇರಿದಂತೆ ಇಬ್ಬರು ಭಕ್ತರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ರವಾನಿಸಲಾಗಿದ್ದು, ಬಸಪ್ಪ ಪೂಜಾರ, ಸಿದ್ದಪ್ಪ ಇಂಗಳ್ಳಳ್ಳಿ, ಸೋಮಣ್ಣ ದೇಸಾಯಿ ಎಂದು ಗುರುತಿಸಲಾಗಿದೆ.‌ ಸೋಮಣ್ಣ ದೇಸಾಯಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಂಬಂಧಿಯಾಗಿದ್ದು, ಜಿಲ್ಲಾಸ್ಪತ್ರೆಗೆ ವಿನಯ್ ಕುಲಕರ್ಣಿ ಭೇಟಿ ನೀಡಿ, ವಿಚಾರಣೆ‌ ನಡೆಸಿ, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದರು. ಇನ್ನು  ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos