ಸಂಕ್ರಾಂತಿ: 400 KSRTC ಹೆಚ್ಚುವರಿ ಬಸ್ ವ್ಯವಸ್ಥೆ

ಸಂಕ್ರಾಂತಿ: 400 KSRTC ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು: ಗಣೇಶ ಚತುರ್ಥಿ, ದಸರಾ, ದೀಪಾವಳಿ, ಕ್ರಿಸ್ಮಸ್ ಹೀಗೆ ಹಬ್ಬಗಳ ಸೀಜನ್ ಬಂತು ಅಂದರೆ ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ‌ ಲಾಟರಿ. ಸಿಕ್ಕಿದ್ದೆ ಚಾನ್ಸ್ ಅಂತ ಜನರಿಂದ ಸುಲಿಗೆಗೆ ಇಳಿದು ಬಿಡ್ತಾರೆ. ರಜೆ ಅಂತ ಮನೆ ಕಡೆ ಹೋರಟವರ ಬಳಿ ಹಗಲು ದರೋಡೆ ಶುರು ಮಾಡ್ತಾರೆ.  ಸಾಲು-ಸಾಲು ರಜೆ ಬಂತು ಅಂದರೆ ಖಾಸಗಿ ಬಸ್ ಗಳಿಗೆ ಹಬ್ಬವೂ ಹಬ್ಬ.

ಎರಡ್ಮೂರು ಪಟ್ಟು ದರ ಏರಿಕೆ ಮಾಡಿ, ಜನರಿಂದ ಸುಲಿಗೆ ಶುರುವಾಗುತ್ತೆ. ಇದರಿಂದ ಮತ್ತೊಂದೆಡೆ ಕೆಎಸ್​ಆರ್​ಟಿಸಿ ವತಿಯಿಂದ ಹೆಚ್ಚುವರಿಯಾಗಿ 400 ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ಸಂಕ್ರಾಂತಿ ಹಬ್ಬಕ್ಕೆ ಬೆಂಗಳೂರಿನಿಂದ ಊರುಗಳಿಗೆ ತೆರಳುತ್ತಿರುವ ಜನ ಹೆಚ್ಚಿದ್ದಾರೆ. ಮೆಜೆಸ್ಟಿಕ್ ನಿಲ್ದಾಣದಲ್ಲಿ ಬಸ್​ಗಾಗಿ ನೂರಾರು ಜನ ಕಾಯುತ್ತಿದ್ದಾರೆ. ಮೆಜೆಸ್ಟಿಕ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್, ಸವಾರರ ಪರದಾಟ ಕಂಡು ಬಂದಿದೆ. ಸದ್ಯ ಕೆಎಸ್​ಆರ್​ಟಿಸಿ ವತಿಯಿಂದ ಹೆಚ್ಚುವರಿಯಾಗಿ 400 ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos