ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ

ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ ಮಹಿಳಾ ಹಾಸ್ಟೆಲ್​ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್​​ನಲ್ಲಿ 29 ವಿದ್ಯಾರ್ಥಿನಿಯರು, ಐವರು ಹೆಚ್ ಬ್ಲಾಕ್​ನಲ್ಲಿ ಹಾಗೂ ನಾಲ್ವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಂತಿ, ಭೇದಿಯಿಂದ ತ್ರೀವ ಅಸ್ಬಸ್ಥಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ‌. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಯರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಬಿಎಂಸಿಆರ್​​​ಐ ಮುಖ್ಯಸ್ಥ ಹಾಗೂ ನಿರ್ದೇಶಕ ಡಾ.ಕೆ.ರಮೇಶ್ ಕೃಷ್ಣ ತಿಳಿಸಿದ್ದಾರೆ. ವಿದ್ಯಾರ್ಥಿನಿಯರು ದಿಢೀರ್​ ಅಸ್ವಸ್ಥರಾಗಲು ಕಾರಣ ಏನೆಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos