ಇಂದಿನಿಂದ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್

ಇಂದಿನಿಂದ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್

ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ 4 ನೇ ಪಂದ್ಯ ಇಂದು ಆರಂಭವಾಗಲಿದೆ. ಈ ಪಂದ್ಯದಲ್ಲಿ ಬಾರತ ಗೆದ್ದರಿ ಸರಣಿ ಕೈ ವಶವಾಗುತ್ತದೆ. ಆದರೆ ಇಂಗ್ಲೆಂಡ್ ಈ ಪಂದ್ಯ ಮಾಡು ಇಲ್ಲವೆ ಮಡಿ ಪಂದ್ಯವಾಗಿದೆ.

ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 434 ರನ್‌ಗಳಿಂದ ಗೆದ್ದ ಭಾರತ ಇದೀಗ ಮತ್ತೊಂದು ಮಹತ್ವದ ಪಂದ್ಯಕ್ಕೆ ಸಜ್ಜಾಗಿದೆ. ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂ ಕಾಂಪ್ಲೆಕ್ಸ್‌ನಲ್ಲಿ ಇಂದು ಇಂಡೋ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್‌ ಆರಂಭವಾಗಲಿದೆ. ಸದ್ಯ ಐದು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಹೀಗಾಗಿ ಈ ಟೆಸ್ಟ್ ಪಂದ್ಯವನ್ನು ಗೆದ್ದರೆ, ಭಾರತವು ಸರಣಿಯನ್ನು ವಶಪಡಿಸಿಕೊಳ್ಳಲಿದೆ. ರೋಹಿತ್ ಸೇನೆ ಈ ಪಂದ್ಯವನ್ನೂ ಗೆಲ್ಲಲೇಬೇಕೆಂಬ ಹಠದಲ್ಲಿದೆ. ಇದಕ್ಕಾಗಿ ಕಠಿಣ ಅಭ್ಯಾಸ ಕೂಡ ನಡೆಸುತ್ತಿದೆ. ಇದು ಇಂಗ್ಲೆಂಡ್​ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಮೊದಲ ಪಂದ್ಯವನ್ನು ಗೆದ್ದು ಇಂಗ್ಲೆಂಡ್ ತಂಡವು ಭರ್ಜರಿ ಆರಂಭ ಪಡೆದಿತ್ತು. ಆದರೆ ನಂತರ ಟೀಮ್ ಇಂಡಿಯಾ ಬಲಿಷ್ಠವಾಗಿ ಪುನರಾಗಮನ ಮಾಡಿತು. ಸತತ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಸೋತಿದೆ. ಟೀಮ್ ಇಂಡಿಯಾ 0-1 ರಿಂದ 2-1 ಮುನ್ನಡೆ ಸಾಧಿಸಿತು. ಇನ್ನು 4ನೇ ಪಂದ್ಯ ಗೆದ್ದರೆ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಳ್ಳಲಿದೆ.

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಒಲೀ ರಾಬಿನ್ಸನ್, ಜೇಮ್ಸ್ ಅ್ಯಂಡರ್ಸನ್, ಶೋಯೆಬ್ ಬಶೀರ್.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಫ್ರೆಶ್ ನ್ಯೂಸ್

Latest Posts

Featured Videos