ಜಮ್ಮುವಿನಲ್ಲಿ ಬಸ್ ಮೇಲೆ ಗ್ರೆನೇಡ್ ದಾಳಿ ನಡೆಸಿದ ಪರಿಣಾಮ 6 ಮಂದಿಗೆ ಗಾಯ

ಜಮ್ಮುವಿನಲ್ಲಿ ಬಸ್ ಮೇಲೆ ಗ್ರೆನೇಡ್ ದಾಳಿ ನಡೆಸಿದ ಪರಿಣಾಮ 6 ಮಂದಿಗೆ ಗಾಯ

ಶ್ರೀನಗರ, ಮಾ.7, ನ್ಯೂಸ್ ಎಕ್ಸ್ ಪ್ರೆಸ್: ಜಮ್ಮುವಿನ ಬಸ್ ನಿಲ್ದಾಣದಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ 6 ಮಂದಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.

ಬಸ್ ನ ಒಳಗಡೆ ಗ್ರೆನೇಡ್ ಸ್ಫೋಟಗೊಂಡಿದ್ದು, ಘಟನಾ ಸ್ಥಳವನ್ನು ಪೊಲೀಸರು ಸುತ್ತುವರಿದಿದ್ದಾರೆ.

ಘಟನೆಯ ಬಳಿಕ ಜಮ್ಮುವಿನಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಹೈ ಆಲರ್ಟ್ ಘೋಷಿಸಲಾಗಿದೆ. ಸ್ಫೋಟಗೊಂಡ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆಂದು ಹೇಳಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos