ಶೇಕಡ 60 ರಷ್ಟು ಕನ್ನಡ ನಾಮಫಲಕಕ್ಕೆ ನಾಳೆ ಡೆಡ್‌ ಲೈನ್

ಶೇಕಡ 60 ರಷ್ಟು ಕನ್ನಡ ನಾಮಫಲಕಕ್ಕೆ ನಾಳೆ ಡೆಡ್‌ ಲೈನ್

ಬೆಂಗಳೂರು: ಕನ್ನಡ ನಮ್ಮ ಮಾತೃಭಾಷೆ, ಅದನ್ನ ಬಳಸಬೇಕು. ಬೇರೆ ಭಾಷೆಗಳಿಗೆ ಅವರರವರ ರಾಜ್ಯದಲ್ಲಿ ಬೆಲೆ ಕೊಡುತ್ತಾರೆ. ನಮ್ಮ ರಾಜ್ಯದಲ್ಲಿ ಕನ್ನಡ ಬೆಳೆಯಬೇಕು. ಕನ್ನಡ ನಾಮಫಲಕ ಅಷ್ಟೇ ಅಲ್ಲ, ಕನ್ನಡದಲ್ಲೇ ವ್ಯವಹರಿಸಬೇಕು ಎಂದು ಕೆಲ ವ್ಯಾಪಾರಿಗಳು ಹೇಳಿದ್ದಾರೆ. ಶೇಕಡ 60 ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ ಕನ್ನಡ ಪರ ಸಂಘಟನೆಗಳ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ.

ಅಂಗಡಿ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ನಾಳೆ ಒಂದು ದಿನ ಸಮಯಾವಕಾಶ ನೀಡಲಾಗಿದ್ದು ನಾಳೆಯೂ  ಕಡ್ಡಾಯ ಕನ್ನಡ  ನಾಮಫಲಕ ಹಾಕದಿದ್ದರೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಕನ್ನಡ ನಾಮಫಲಕ ಹಾಕದಿದ್ದರೆ ಅಂಗಡಿಗಳನ್ನು ಬಂದ್ ಮಾಡುತ್ತೇವೆ. ಈಗಾಗಲೇ ಶೇಕಡಾ 90ರಷ್ಟು ಕನ್ನಡ ನಾಮಫಲಕ ಹಾಕಲಾಗಿದೆ. ಇನ್ನು ಉಳಿದಿರುವುದು 3 ಸಾವಿರ ನಾಮಫಲಕ ಮಾತ್ರ​. ಅಂತಾರಾಷ್ಟ್ರೀಯ ಕಂಪನಿಗಳು, SBI, ಕೆನರಾ ಬ್ಯಾಂಕ್ ಮನವಿ ನೀಡಿವೆ. ಕನ್ನಡ ನಾಮಫಲಕ ಅಳವಡಿಕೆಗೆ ಮತ್ತಷ್ಟು ಗಡುವು ಕೇಳಿದ್ದಾರೆ. ಈ ಬಗ್ಗೆ ನಾಳೆ ಸಂಜೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos