70ನೇ ಗಣರಾಜ್ಯೋತ್ಸವ: ರಾಷ್ಟ್ರಪತಿ ಭಾಷಣ

70ನೇ ಗಣರಾಜ್ಯೋತ್ಸವ: ರಾಷ್ಟ್ರಪತಿ ಭಾಷಣ

ನವದೆಹಲಿ: ಮಹಾತ್ಮ ಗಾಂಧೀಜಿಯ
150ನೇ ವರ್ಷಾಚರಣೆ ಹಿನ್ನಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ವಿಶೇಷವಾಗಿದ್ದು, ಗಾಂಧೀಜಿ ಅವರನ್ನು ವಿಶ್ವವೇ ಕೊಂಡಾಡುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

70ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದರು. ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.

‘ಬಡತನ ನಿರ್ಮೂಲನೆಯತ್ತ ಭಾರತ ದಿಟ್ಟ ಹೆಜ್ಜೆ ಇಡುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಹಲವು ಸುಧಾರಣೆಗಳು ಆಗುತ್ತಿವೆ. ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿಯಾಗುತ್ತಿವೆ’ ಎಂದು ರಾಮನಾಥ್ ಕೋವಿಂದ್ ಹೇಳಿದರು.

ಈ ವರ್ಷ ದೇಶದ ಜನರಿಗೆ ಮಹತ್ವದ ಜವಾಬ್ದಾರಿ ಇದೆ. ನಾವೆಲ್ಲರೂ 17ನೇ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕಿದೆ. ಈ ಚುನಾವಣೆ 21ನೇ ಶತಮಾನದ ಯುವಕರಿಗೆ ವಿಶೇಷವಾದದ್ದು, ಮೊದಲ ಬಾರಿಗೆ ಅವರು ಮತದಾನ ಮಾಡಲಿದ್ದಾರೆ. ಶಿಕ್ಷಣ, ಕಲೆ, ಆರೋಗ್ಯ, ಕ್ರೀಡಾ ಕ್ಷೇತ್ರಗಳಲ್ಲಿ ನಮ್ಮ ದೇಶದ ಹೆಣ್ಣು ಮಕ್ಕಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಈಗ ಅವರು ಸೇನಾಪಡೆಯಲ್ಲಿಯೂ ತಮ್ಮ ಶಕ್ತಿ ಪ್ರದರ್ಶಿಸುತ್ತಿದ್ದಾರೆ
ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಪದಕಗಳನ್ನು ಪಡೆಯುತ್ತಿದ್ದಾರೆ. ಈ ಬಾರಿಯ ಸ್ವತಂತ್ರ್ಯ ದಿನಾಚರಣೆ ವಿಶೇಷವಾಗಿದ್ದು. ಅಕ್ಟೋಬರ್ 2ರಂದು ನಾವು ಮಹಾತ್ಮ ಗಾಂಧೀಜಿ ಅವರ
150ನೇ ಜನ್ಮದಿನಾಚರಣೆ ಆಚರಣೆ ಮಾಡುತ್ತಿದ್ದೇವೆ. ಭಾರತದಲ್ಲಿ ಮಾತ್ರ ಆಚರಣೆ ಮಾಡುತ್ತಿಲ್ಲ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos