85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ರಾಮನಗರ, ಡಿ. 28: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2020ರ ಫೆಬ್ರವರಿ 5,6 ಮತ್ತು 7 ರಂದು ಕಲಬುರಗಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಜಾತ್ರೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭಿಮಾನಿಗಳು ಪ್ರತಿನಿಧಿಯಾಗಿ ತಮ್ಮ ಹೆಸರುಗಳನ್ನು ಆಯಾ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರುಗಳಲ್ಲಿ ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 250 ರೂ.ಗಳ ಪ್ರತಿನಿಧಿ ಶುಲ್ಕವನ್ನು ಪಾವತಿಸಿ 2020ರ ಜನವರಿ 14 ರೊಳಗೆ ನೋಂದಾಯಿಸಿಕೊಳ್ಳಬೇಕು.

ಅವಧಿ ಮೀರಿ ಬರುವ ಕೋರಿಕೆಗಳಿಗೆ ಹಾಗೂ ಸಮ್ಮೇಳನ ನಡೆಯುವ ಸ್ಥಳದಲ್ಲಿ ಪ್ರತಿನಿಧಿಗಳ ನೋಂದಾವಣೆಗೆ ಅವಕಾಶವಿರುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos