ವರುಣನ ಆರ್ಭಟ: 88 ಮಂದಿ ಸಾವು

ವರುಣನ ಆರ್ಭಟ: 88 ಮಂದಿ ಸಾವು

ಬಿಹಾರ: ಕಳೆದ ಎರಡು ದಿನಳಿಂದ ವರುಣನ ಆರ್ಭಟ ಜೋರಾಗಿದ್ದು, ಗುಡುಗು ಮಿಂಚು ಸಹಿತ ಭಾರೀ ಮಳೆಗೆ ೮೮ ಮಂದಿ ಮೃತಪಟ್ಟಿದ್ದಾರೆ. ೨೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ತಿಪಾಸ್ತಿ ಹಾನಿಯಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಇಲ್ಲಿನ ಗೋಪಾಲ್‌ಗಂಜ್ ಸೇರಿದಂತೆ ಸುಮಾರು ೨೩ ಜಿಲ್ಲೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣ ತಂಡ ಹೇಳಿದೆ.

ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದ ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೃತರ ಕುಟುಂಬಕ್ಕೆ ೪ ಲಕ್ಷ ಪರಿಹಾರ ಧನ ಘೋಷಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ, ಪಶ್ಚಿಮ ಬಂಗಾಳ ಮುಕ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಸಂತಾಪ ಸೂಚಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos