ಸುಮಲತಾ ಮೇಲೆ ಮುಂದುವರೆದ ಜೆಡಿಎಸ್ ನಾಯಕರ ವಾಗ್ದಾಳಿ

ಸುಮಲತಾ ಮೇಲೆ ಮುಂದುವರೆದ ಜೆಡಿಎಸ್ ನಾಯಕರ ವಾಗ್ದಾಳಿ

ಬೆಂಗಳೂರು, ಏ. 1, ನ್ಯೂಸ್ ಎಕ್ಸ್ ಪ್ರೆಸ್: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ ಬಳಿಕ ಪಕ್ಷೇತರ ಅಭ್ಯರ್ಥಿ ಊರು ಬಿಡುತ್ತಾರೆ. ಆ ಬಳಿಕ ದೇವೇಗೌಡ, ಕುಮಾರಸ್ವಾಮಿಯವರೇ ಮಂಡ್ಯ ಜಿಲ್ಲೆ ಜನತೆಯ ನೆರವಿಗೆ ಬರಬೇಕು ಎಂದಿದ್ದಾರೆ. ಅಂಬರೀಶ್ ಬದುಕಿದ್ದಾಗ ಸುಮಲತಾ ಯಾವಾಗಲಾದರೂ ಮಂಡ್ಯಕ್ಕೆ ಬಂದಿದ್ದಾರಾ ಎಂದು ಪ್ರಶ್ನಿಸಿರುವ ರೇವಣ್ಣ, ಜನತೆ ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಬೇಕು ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos