ಕಾಂಗ್ರೆಸ್ಸಿನಿಂದ ಬಿಜೆಪಿಗೆ ‘ಬಿಗ್ ಶಾಕ್’

ಕಾಂಗ್ರೆಸ್ಸಿನಿಂದ ಬಿಜೆಪಿಗೆ ‘ಬಿಗ್ ಶಾಕ್’

ಗದಗ, ಏ. 8, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ ಫೋಟೋ ಇದೀಗ ವೈರಲ್ ಆಗಿದೆ.

ಶ್ರೀಶೈಲಪ್ಪ ಬಿದರೂರು ಗದಗ ಮತ್ತು ರೋಣ ಕ್ಷೇತ್ರಗಳಲ್ಲಿ ಪ್ರಭಾವಿ ನಾಯಕ. ಜೊತೆಗೆ ಇಲ್ಲಿ ತಮ್ಮ ಹಿಡಿತ ಹೊಂದಿದ್ದು, ಇವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಆದ್ರೆ ಕಳೆದ ಬಾರಿ ಶ್ರೀಶೈಲಪ್ಪ ಅವರಿಗೆ ಬಿಜೆಪಿ ಟಿಕೆಟ್‍ ತಪ್ಪಿತ್ತು. ಹೀಗಾಗಿ ಅಂದು ಸುಮ್ಮನಿದ್ದ ಅವರು ಈಗ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಇದ್ರಿಂದ ಬಿಜೆಪಿಗೆ ಸಂಕಷ್ಟ ಎದುರಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos