ಬೆಂಗಳೂರು, ಏ. 27, ನ್ಯೂಸ್ ಎಕ್ಸ್ ಪ್ರೆಸ್: ಹೆಚ್ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ (ಹೆಚ್ಎಂಟಿ) ನೇಮಕಾತಿ 38 ಪ್ರೊಫೆಷನಲ್ಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಪದವಿ, ಸಿಎ / ಸಿಎಂಎ / ಐಸಿಡಬ್ಲ್ಯೂಎ,ಎಂಬಿಎ, ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ: ಹುದ್ದೆಗಳಿಗನುಸಾರ ಗರಿಷ್ಟ 30,35,45ಮತ್ತು 53 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ: ಹುದ್ದೆಗಳಿಗನುಸಾರ 8,600/-ರಿಂದ 26,500/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್ ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದು.
ಕಚೇರಿಯ ವಿಳಾಸ: ದಿ ಡೆಪ್ಯುಟಿ ಜನರಲ್ ಮ್ಯಾನೇಜರ್, ಹೆಚ್ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್, ಹೆಚ್ಎಂಟಿ ಭವನ, 59, ಬಳ್ಳಾರಿ ರೋಡ್,