ಬಂಗಾಳವನ್ನು ದೀದಿ ಸರ್ವನಾಶ ಮಾಡುತ್ತಿದ್ದಾರೆ: ಮೋದಿ

ಬಂಗಾಳವನ್ನು ದೀದಿ ಸರ್ವನಾಶ ಮಾಡುತ್ತಿದ್ದಾರೆ: ಮೋದಿ

ಪಶ್ಚಿಮ ಬಂಗಾಳ, ಮೇ. 9, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಬಂಕುರಾ ಎಂಬಲ್ಲಿ ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ಮೋದಿ ಅವರು, “ಮಮತಾ ಬ್ಯಾನರ್ಜಿ ಅವರು ಪಶ್ಚಿ ಬಂಗಾಳವನ್ನು ಸರ್ವನಾಶ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಫೋನಿ ಚಂಡಮಾರುತದಿಂದ ಆದ ಹಾನಿಯ ಬಗ್ಗೆ ಮಾಹಿತಿ ಪಡೆಯಲು ನಾನು ಫೋನ್ ಮಾಡಿದರೆ ಅದನ್ನು ಸ್ವೀಕರಿಸುವ ಸೌಜನ್ಯ ಮಮತಾ ಅವರಿಗಿಲ್ಲ. ಅವರಿಗೆ ಪಶ್ಚಿಮ ಬಂಗಾಳದ ಜನರ ಬಗ್ಗೆ ನಿಜಕ್ಕೂ ಕಾಳಜಿ ಇದ್ದಿದ್ದರೆ ನನ್ನ ಕರೆ ಸ್ವೀಕರಿಸಿ, ಕೇಂದ್ರದ ಸಹಾಯ ಕೇಳುತ್ತಿದ್ದರು” ಎಂದು ಮೋದಿ ಹೇಳಿದರು.

“ಫೋನಿ ಬಗ್ಗೆ ವಿಚಾರಿಸಲು ನಾನು ಅವರಿಗೆ ಎರಡು ಬಾರಿ ಫೋನ್ ಮಾಡಿದ್ದೆ. ಆದರೆ ನನ್ನನ್ನು ಪ್ರಧಾನಿ ಎಂದು ಒಪ್ಪದ ದೀದಿ ನಮ್ಮ ಕರೆಯನ್ನು ಸ್ವೀಕರಿಸಲಿಲ್ಲ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದಿದೆ. ಬಿಜೆಪಿಗೆ ಬೆಂಬಲ ದೊರಕಿದೆ ಎಂದು ಅವರು ಹೇಳಿದರು.

ಕಳೆದ ಹಲವು ದಿನಗಳಿಂದ ಮಮತಾ ಬ್ಯಾನರ್ಜಿ ಮತ್ತು ನರೇಂದ್ರ ಮೋದಿ ಅವರ ನಡುವಲ್ಲಿ ಮಾತಿನ ಚಕಮಕಿ ನಡೆಯುತ್ತಿದ್ದು, ನರೇಂದ್ರ ಮೋದಿ ಆವರಿಗೆ ಪ್ರಜಾಪ್ರಭುತ್ವದ ಕಪಾಳಮೋಕ್ಷ ನೀಡಬೇಕು ಎಂದು ಇತ್ತೀಚೆಗೆ ಮಮತಾ ಬ್ಯಾನರ್ಜಿ ಹೇಳಿದ್ದರು. ನನ್ನ ಕರೆಯನ್ನೂ ಸ್ವೀಕರಿಸದ ಮಮತಾ ಬ್ಯಾನರ್ಜಿಗೆ ದುರಹಂಕಾರ ಎಂದು ಮೋದಿ ಟಿಕಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos