ನವದೆಹಲಿ, ಮೇ.10,ನ್ಯೂಸ್ ಎಕ್ಸ್ ಪ್ರೆಸ್ : ನಾನು ಕಪ್ಪು ಕುದುರೆಯಲ್ಲ, ಪ್ರಧಾನಿ ಹುದ್ದೆಯ ಆಕಾಂಕ್ಷಿಯೂ ಅಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವರು, ಪ್ರಧಾನಿ ಹುದ್ದೆಯ ಬಗ್ಗೆ ನಾನು ಯಾವುದೇ ಕನಸು ಕಟ್ಟಿಕೊಂಡಿಲ್ಲ. ನರೇಂದ್ರ ಮೋದಿ ನಮ್ಮ ನಾಯಕರು, ಅವರೇ ಪ್ರಧಾನಿಯಾಗುತ್ತಾರೆ.ಲೋಕಸಭಾ ಚುನಾವಣೆ ಫಲಿತಾಂಶ ಮೇ 23ರಂದು ಬರಲಿದ್ದು, ಮತ್ತೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಕೇರಳದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆಯಲಿದೆ. ಉತ್ತರ ಪ್ರದೇಶದಲ್ಲಿಯೂ ನಿರೀಕ್ಷೆಗಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಮಾಡಿದ ಸಾಧನೆಗಳನ್ನು ಗುರುತಿಸಿ ಜನರು ನಮ್ಮನ್ನು ಮತ್ತೆ ಆಯ್ಕೆ ಮಾಡಿದ್ದಾರೆ. ಕೃಷಿ, ನೀರಾವರಿ, ಆರ್ಥಿಕ ಬೆಳವಣಿಗೆ, ಮೂಲ ಸೌಕರ್ಯ, ಜನಧನ್ ಯೋಜನೆ, ರಸ್ತೆ ಸೇರಿದಂತೆ ಅನೇಕ ವಿಷಯಗಳನ್ನು ಜನರು ಗಮನಿಸಿದ್ದಾರೆ ಎಂದು ತಿಳಿಸಿದರು.