ಮೈಸೂರು, ಮೇ.13, ನ್ಯೂಸ್ ಎಕ್ಸ್ ಪ್ರೆಸ್: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕುಗೊಂಡಿದೆ. ಮೈಸೂರು ನಗರ ಕಮಿಷನರ್ ಕೆ.ಟಿ. ಬಾಲಕೃಷ್ಣ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಪ್ರಕರಣದ ಗಂಭೀರತೆ ಪರಿಗಣಿಸಿ ತನಿಖೆಯನ್ನ ಮತ್ತಷ್ಟು ಚುರುಕುಗೊಳಿಸಿದ್ದಾರೆ.
ರಿಂಗ್ ರಸ್ತೆಯ ಬಾರ್ ಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಬಾರ್ಗಳ ಸಿಸಿ ಕ್ಯಾಮರಾಗಳ ಮೂಲಕ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಜಿಲ್ಲಾ ಪೊಲೀಸರು ಹಾಗೂ ನಗರ ಪೊಲೀಸರ ಒಟ್ಟು 11 ತಂಡದಿಂದ ಕೆ.ಆರ್. ವಿಭಾಗದ ಎಸಿಪಿ ಬಿ.ವಿ.ನಾಯಕ್ ಮುಂದಾಳತ್ವದಲ್ಲಿ ತನಿಖೆ ನಡೆಯುತ್ತಿದೆ. ಈಗಾಗಲೇ ಲಿಂಗಬುದ್ದಿ ಪಾಳ್ಯ ಟವರ್ ಲೊಕೇಷನ್ ಟ್ರೇಸ್ ಮಾಡಿರೋ ಪೊಲೀಸರು, ಸುಮಾರು 200 ಜನರನ್ನ ವಿಚಾರಣೆಗೆ ಒಳಪಡಿಸಲು ಮುಂದಾಗಿದ್ದಾರೆ.