ಬೆಂಗಳೂರು, ಮೇ. 14, ನ್ಯೂಸ್ ಎಕ್ಸ್ ಪ್ರೆಸ್: ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಮೆಂತೆಕಾಳು, ಮೆಂತೆ ನೆನೆಹಾಕಿದ ನೀರು ಕುಡಿಯುವುದರಿಂದ ಸಾಕಷ್ಟು ಅನುಕೂಲ. ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು.
ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದರೆ, ನೀರನ್ನು ಚೆಲ್ಲಬಾರದು. ಮೆಂತೆ ಕಾಳುಗಳನ್ನು ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಂಡು ಅದಕ್ಕೆ ಮೊಸರು ಸೇರಿಸಿ ಮುಖ ಹಚ್ಚಿ, ಅರ್ಧ ಗಂಟೆಯ ನಂತರ ಉಗುರು ಬೆಚ್ಚಗಿನ ನೀರಲ್ಲಿ ಮುಖ ತೊಳೆದರೆ ನಿಮ್ಮ ಮುಖ, ಕಾಂತಿಯುತವಾಗಿ ಕಾಣುತ್ತೆ. ಮೆಂತೆಯಲ್ಲಿ ಪ್ರೋಟಿನ್ ಹೆಚ್ಚಾಗಿ ಇರುವುದರಿಂದ ಆ ನೀರನ್ನ ತಲೆಗೆ ಹಚ್ಚಿಕೊಂಡು ಮಸಾಜ್ ಮಾಡಬಹುದು. ಇದರಿಂದ ಕೂದಲಿನ ಬುಡ ಗಟ್ಟಿಯಾಗಿ, ಕೂದಲು ಉದುರುವುದು ಕಡಿಮೆಯಾಗುತ್ತದೆ.
ಇನ್ನು ತೆಗೆದಿಟ್ಟಿದ್ದ ಮೆಂತೆ ನೀರು ಅಥವಾ ಮೆಂತೆ ಕಾಳನ್ನು ಬೆಳಗ್ಗೆ ಎದ್ದ ಕೂಡಲೇ ಕುಡಿಯಬಹುದು. ಇದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತೆ. ಜೊತೆಗೆ ಬೊಜ್ಜು ಕರಗಿಸಲು ಸಹಕಾರಿ. ಮೆಂತೆಯಲ್ಲಿ ಗ್ಲಾಕ್ಟೊಮನ್ನನ್ , ಪೊಟಾಶಿಯಂ ಇದೆ ಇದು ರಕ್ತದೊತ್ತಡ ತಡೆಯಲು ಸಹಕಾರಿ.