ಹುಬ್ಬಳ್ಳಿ, ಮೇ. 16, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಕ್ತಿ ಇದ್ದರೆ, ತಮ್ಮ ಶಾಸಕರನ್ನು ಹಿಡಿದಿಟ್ಟಕೊಳ್ಳಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಅದಕ್ಕಾಗಿ ದೇವರಾಜ ಅರಸು ಅವರನ್ನು ಹೋಲಿಕೆ ಮಾಡಿಕೊಳ್ಳುತ್ತಿದ್ದಾರೆ. ಹೋಲಿಸಿಕೊಳ್ಳುವ ನೈತಿಕತೆ ಸಿದ್ದರಾಮಯ್ಯ ನವರಿಗಿಲ್ಲ.ಯಡಿಯೂರಪ್ಪನವರು ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ನಾವು ಸಿಎಂ ಆಗ್ತೀವಿ ಎಂದು ಸಿದ್ದರಾಮಯ್ಯ ಮತ್ತು ಸಚಿವ ಡಿಕೆ ಶಿವಕುಮಾರ್ ಹೇಳುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.