ಪಾಟ್ನಾ , ಮೇ. 16, ನ್ಯೂಸ್ ಎಕ್ಸ್ ಪ್ರೆಸ್: ಬಿಜೆಪಿ ಸರ್ಕಾರ ಆಸ್ತಿತ್ವಕ್ಕೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಭವಿಷ್ಯ ನುಡಿದ್ದಾರೆ.
ಚುನಾವಣೆ ಫಲಿತಾಂಶದ ಹಿನ್ನಲೆ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ. ಸದ್ಯ ದೇಶದಲ್ಲಿ ಒಂದು ಹಂತದ ಚುನಾವಣೆಯಷ್ಟೇ ಬಾಕಿ ಉಳಿದಿದ್ದು, ದೇಶದಾದ್ಯಂತ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಾಗ ಆದ ಅನುಭವದಿಂದ ಹೇಳುತ್ತಿದ್ದೆನೆ ಎಂದರು. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ. 2014 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರಕ್ಕೆ ಬಂದಿದ್ದು,ಆದರೆ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಗುಲಾಮ್ ನಬಿ ಆಜಾದ್ ಆರೋಪಿಸಿದರು.