ಶೋಭಾಗೆ, ಸಿದ್ದರಾಮಯ್ಯತೀರುಗೇಟು!

ಶೋಭಾಗೆ, ಸಿದ್ದರಾಮಯ್ಯತೀರುಗೇಟು!

ಬೆಂಗಳೂರು, ಮೇ. 16, ನ್ಯೂಸ್ಎಕ್ಸ್ ಪ್ರೆಸ್‍: ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶಾಸಕರ ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯವಾಗದಿದ್ದರೆ ಸಿದ್ದರಾಮಯ್ಯ ಕೈಗೆ ಬಳೆ ತೊಟ್ಟುಕೊಳ್ಳುವುದೇ ವಾಸಿ ಎಂದು ಟೀಕಿಸಿದ್ದ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರಿಗೆ ಸಿದ್ದರಾಮಯ್ಯ ತಮ್ಮ ಧಾಟಿಯಲ್ಲಿ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ತಿರಿಗೇಟು ನೀಡಿ ಕುಮಾರಿ ಶೋಭಾ ಕರಂದ್ಲಾಜೆ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos