ಬೆಂಗಳೂರು, ಮೇ. 23, ನ್ಯೂಸ್ ಎಕ್ಸ್ ಪ್ರೆಸ್: ಮಾಧ್ಯಮಗಳ ಮೇಲೆ ಪದೇ ಪದೇ ಹರಿಹಾಯುತ್ತಿರುವ ರಾಜ್ಯ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಮಂಡ್ಯ, ತುಮಕೂರಿನಲ್ಲಿ ಫಲಿತಾಂಶ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮನೆಯಿಂದ ತಾಜ್ ವೆಸ್ಟೆಂಡ್ ಹೋಟೆಲ್ ಗೆ ತೆರಳಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಚ್‍ಡಿಕೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ. ಯಾವ ಕಾರಣಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.