ಕುಂದಗೋಳ, ಮೇ. 23, ನ್ಯೂಸ್ ಎಕ್ಸ್ ಪ್ರೆಸ್: ಇಂದು ಲೋಕಸಭಾ ಚುನಾವಣೆಯ ಫಲಿತಾಂಶದ ಜೊತೆಗೆ ಉಪಚುನಾವಣೆಯ ಫಲಿತಾಂಶವು ಕೂಡ ಇಂದೆ. ಹೌದು, ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಗೆಲವು ಸಾಧಿಸಿದ್ದಾರೆ.
ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಚಿಕ್ಕನಗೌಡರನ್ನು ಪರಾಭವಗೊಳಿಸಿ ಗೆಲುವು ಸಾಧಿಸಿದ್ದು, ಅಧಿಕೃತ ಪ್ರಕಟಣೆಯಷ್ಟೇ ಬಾಕಿ ಇದೆ.
ಇನ್ನು ಉಮೇಶ್ ಜಾದವ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಅವಿನಾಶ್ ಜಾದವ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಸುಭಾಷ್ ರಾಥೋಡ್ ಅವರನ್ನು ಪರಾಭವಗೊಳಿಸಿದ್ದಾರೆ.