ಕೋಲಾರ, ಮೇ. 23, ನ್ಯೂಸ್ ಎಕ್ಸ್ ಪ್ರೆಸ್: ಜನಾದೇಶಕ್ಕೆ ನಾನು ತಲೆಬಾಗುತ್ತೇನೆ, ನನ್ನನ್ನು ಆಶೀರ್ವದಿಸಿದ ಎಲ್ಲರಿಗೂ ನನ್ನ ಧನ್ಯವಾದ. ಇದು ಮೋದಿಯ ಮ್ಯಾಜಿಕ್ ಎನ್ನಲು ಬಯಸುತ್ತೇನೆ. ಇಡೀ ದೇಶದಲ್ಲಿ ಅವರ ಮ್ಯಾಜಿಕ್ ನೆಡೆದಿದೆ ಎಂದು ಕೋಲಾರದಲ್ಲಿ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದರು.
ಇದೇ ವೇಳೆಯಲ್ಲಿ ಮಾತನಾಡಿದ ಅವರು, ವ್ಯವಸ್ಥೆಯಲ್ಲಿ ಕೆಲ ಲೋಪದೋಷಗಳಿವೆ, ಅದನ್ನು ಹೈಕಮಾಂಡ್ ಜೊತೆ ನಾನು ಚರ್ಚಿಸುತ್ತೇನೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಏನೇನು ಮಾಡಿದ್ದೇನೆ ಎಂದು ನನಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸುವ ಕೆಲಸ ಮಾಡಲಿದ್ದೇನೆ ಎಂದರು.