ಬೆಂಗಳೂರು, ಮೇ. 25, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು, ಮೇ. 25, ನ್ಯೂಸ್ ಎಕ್ಸ್ ಪ್ರೆಸ್:ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, ಇದರ ಬೆನ್ನಲ್ಲೇ ‘ಆಪರೇಷನ್ ಕಮಲ’ ಮಾಡುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೇರಲು ಸಿದ್ಧತೆ ನಡೆದಿದೆ.ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಈಗಾಗಲೇ ಆಪರೇಷನ್ ಕಮಲಕ್ಕೆ ಒಳಗಾಗಿದ್ದು, ಅವರ ಮೂಲಕ ಮತ್ತಷ್ಟು ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ಯತ್ನಿಸುತ್ತಿರುವಾಗಲೇ ಇದಕ್ಕೆ ಪ್ರತ್ಯಾಸ್ತ್ರ ಹೂಡಲು ಮೈತ್ರಿ ನಾಯಕರು ಸಜ್ಜಾಗಿದ್ದಾರೆ.
ಹೇಗಾದರೂ ಮಾಡಿ ಮೈತ್ರಿ ಸರ್ಕಾರವನ್ನು ಸರ್ಕಾರ ಉಳಿಸಿಕೊಳ್ಳಲೇಬೇಕೆಂಬ ನಿಟ್ಟಿನಲ್ಲಿ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳ ನಾಯಕರು ಕಾರ್ಯಪ್ರವೃತ್ತರಾಗಿದ್ದು, ಹಾಲಿ ಸಚಿವರುಗಳ ರಾಜೀನಾಮೆ ಪಡೆದು ಈ ಸ್ಥಾನಗಳಿಗೆ ಅತೃಪ್ತರಿಗೆ ಅವಕಾಶ ಕಲ್ಪಿಸಿಕೊಡಲು ತೀರ್ಮಾನಿಸಲಾಗಿದೆ. ಸಚಿವರುಗಳಾದ ಕೃಷ್ಣಬೈರೇಗೌಡ, ಯು.ಟಿ. ಖಾದರ್, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಮೊದಲಾದವರು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧರಾಗಿದ್ದಾರೆಂದು ಹೇಳಲಾಗಿದ್ದು, ಅತೃಪ್ತರ ಮನವೊಲಿಕೆ ಕಾರ್ಯಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.