ಬೆಂಗಳೂರು, ಮೇ. 25, ನ್ಯೂಸ್ ಎಕ್ಸ್ ಪ್ರೆಸ್: ಅತೃಪ್ತ ಶಾಸಕ ಎಂದೇ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಇದೀಗ ಮತ್ತೊಮ್ಮೆ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನದ ಪ್ರಸ್ತಾಪ ಮುಂದಿಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿ ಅವರನ್ನು ಹೇಗಾದರೂ ಮಾಡಿ ಸಮಾಧಾನಪಡಿಸಬೇಕು ಎಂಬ ನಿಲುವಿಗೆ ಬಂದಿರುವ ಕುಮಾರಸ್ವಾಮಿ ಅವರು ಸಚಿವ ಸ್ಥಾನ ನೀಡುವ ಉದ್ದೇಶ ಹೊಂದಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲು ಬಯಸಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.