ಬೆಂಗಳೂರು, ಜೂನ್. 7, ನ್ಯೂಸ್ ಎಕ್ಸ್ ಪ್ರೆಸ್ : ದೀರ್ಘ ಕಾಲದ ರಜೆ ಮೇಲೆ ತೆರಳಿದ್ದ ಐಎಎಸ್ ಅಧಿಕಾರಿ ವಿ. ರಶ್ಮಿ ಮಹೇಶ್ ಅವರು ಸರ್ಕಾರಿ ಸೇವೆಗೆ ವಾಪಸಾಗಿದ್ದಾರೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ. ಶಿವಯೋಗಿ ಸಿ. ಕಳಸದ್ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ವಿ. ರಶ್ಮಿ ಮಹೇಶ್ ನಿಯೋಜನೆಗೊಂಡಿದ್ದಾರೆ.
2016ರ ಸೆಪ್ಟೆಂಬರ್ ಬಳಿಕ ರಶ್ಮಿ ಮಹೇಶ್ ದೀರ್ಘ ರಜೆ ಪಡೆದು ತೆರಳಿದ್ದರು. ಮೈಸೂರಿನಲ್ಲಿ ಆಡಳಿತ ಮತ್ತು ತರಬೇತಿ ಸಂಸ್ಥೆ ಮಹಾ ನಿರ್ದೇಶಕಿಯಾಗಿ, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿಯಾಗಿ, ಬಿಬಿಎಂಪಿ ವಿಶೇಷ ಆಯುಕ್ತರಾಗಿ ವಿವಿಧ ಹುದ್ದೆಗಳಲ್ಲಿ ಖಡಕ್ ಕ್ರಮಗಳಿಂದ ಹೆಸರಾಗಿದ್ದರು.