ಕೋಲ್ಕತಾ, ಜೂನ್.11, ನ್ಯೂಸ್ ಎಕ್ಸ್ ಪ್ರೆಸ್: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದು 20 ದಿನಗಳಾಗುತ್ತಾ ಬಂದಿದ್ದರೂ, ಚುನಾವಣೆ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಆರಂಭವಾದ ಸಂಘರ್ಷ ಇನ್ನೂ ನಿಂತಿಲ್ಲ. ಕೇಂದ್ರದ ಬಿಜೆಪಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿರುವ ತೃಣಮೂಲ ಕಾಂಗ್ರೆಸ್ ಅಧಿನಾಯಕಿಯೂ ಆಗಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹಿಂಸೆಗೆ ಕುಮ್ಮಕ್ಕು ನೀಡಿ, ನನ್ನ ಸರ್ಕಾರವನ್ನು ಬೀಳಿಸುವ ಸಂಚು ನಡೆಯುತ್ತಿದೆ. ದೇಶದಲ್ಲಿ ಬಿಜೆಪಿ ವಿರುದ್ಧ ಪ್ರತಿಭಟಿಸುತ್ತಿರುವುದು ನಾನೊಬ್ಬಳೇ. ಹೀಗಾಗಿ ನನ್ನ ದನಿ ಹತ್ತಿಕ್ಕುವ ಯತ್ನ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲು ಬಿಜೆಪಿ ಕೋಟಿಗಟ್ಟಲೆ ಹಣ ಸುರಿಯುತ್ತಿದೆ ಎಂದು ಹರಿಹಾಯ್ದಿದ್ದಾರೆ.