ಬಾಗಲಕೋಟೆ: 58 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಬಾಗಲಕೋಟೆ: 58 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಬಾಗಲಕೋಟೆ: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಬಾಗಲಕೋಟೆ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 58 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜುಲೈ 4,2019ರೊಳಗೆ ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್ಸಿ ಅಥವಾ ಐಸಿಎಸ್ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಕನಿಷ್ಟ 18 ರಿಂದ ಸಾಮಾನ್ಯ ಅಭ್ಯರ್ಥಿಗಳು ಗರಿಷ್ಟ 35 ವರ್ಷ, 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು ಗರಿಷ್ಟ 38 ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ: ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್.ಇ ಅಥವಾ ಐ.ಸಿ.ಎಸ್.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ  ರೂ.50/- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ    ರೂ.200/-

ಅಭ್ಯರ್ಥಿಗಳು ಇಲ್ಲಿ ತಿಳಿಸಲಾಗಿರುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದು.

 

ಫ್ರೆಶ್ ನ್ಯೂಸ್

Latest Posts

Featured Videos