ಬ್ಯಾಟ್ ನಿಂದ ಪತಿಗೆ ಬಾರಿಸಿದ ನಟಿ ‘ದೀಪಿಕಾ’

ಬ್ಯಾಟ್ ನಿಂದ ಪತಿಗೆ  ಬಾರಿಸಿದ ನಟಿ ‘ದೀಪಿಕಾ’

ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಪತಿ ರಣ್‍ವೀರ್ ಸಿಂಗ್‍ಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದಿದ್ದಾರೆ. ಈ ವಿಡಿಯೋವನ್ನು ರಣ್‍ವೀರ್ ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ.

ರಣ್‍ವೀರ್ ಸಿಂಗ್ ತಮ್ಮ ಪತ್ನಿ ದೀಪಿಕಾ ಪಡುಕೋಣೆ ಕ್ರಿಕೆಟ್ ಬ್ಯಾಟ್‍ನಿಂದ ಬೂಮರಾಂಗ್ ವಿಡಿಯೋ ಮಾಡಿ ಅದನ್ನು ಟ್ವಿಟ್ಟರ್ ಹಾಗೂ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, “ನನ್ನ ಜೀವನದ ಕತೆ ಇದು – ರಿಯಲ್ ಹಾಗೂ ರೀಲ್” ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ರಣ್‍ವೀರ್ ಸಿಂಗ್ ಮಾಜಿ ಕ್ರಿಕೆಟ್ ಆಟಗಾರ ಕಪಿಲ್ ದೇವ್ ಬಯೋಪಿಕ್‍ನಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕಪಿಲ್ ದೇವ್ ಪತ್ನಿಯಾಗಿ ದೀಪಿಕಾ ಪಡುಕೋಣೆ ರೋಮಿ ದೇವ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ವಿಷಯವನ್ನು ದೀಪ್‍ವೀರ್ ನಿರ್ದೇಶಕ ಕಬೀರ್ ಖಾನ್ ಜೊತೆಯಿರುವ ಫೋಟೋ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos